ಪುತ್ತೂರು: ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78 ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರದ ಬಲ ಭಾಗದಿಂದ ಹೂವಿನ ಹಾರ ಜಾರುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ದೇವರ ಪೂರ್ಣಾನುಗ್ರಹ ಲಭಿಸಿದೆ.
ಜ.15 ರಂದು ಬೆಳಿಗ್ಗೆ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಶ್ರೀಗಳು ಜಯಂತ್ಯೋತ್ಸವದ ತಯಾರಿಗೆ ಕಚೇರಿ ಮತ್ತು ಚಪ್ಪರ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಾಲಯ ಉದ್ಘಾಟನೆಯ ಮುಂದೆ ಕಚೇರಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಬಳಿಕ ಕಚೇರಿಯಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಾಲಯ ಉದ್ಘಾಟಿಸಿದರು.
ಇದೇ ಸಂದರ್ಭ ದೇವರ ಭಾವಚಿತ್ರದ ಬಲ ಭಾಗದಿಂದ ಹೂವಿನ ಹಾರ ಜಾರಿದೆ. ಇದನ್ನು ಗಮನಿಸಿದ ಅಲ್ಲಿ ನೆರೆದವರು ದೇವರ ವರಪ್ರಸಾದ ಲಭಿಸಿದೆ ಎಂದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ರಾಮದಾಸ್ ಗೌಡ, ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಜಯಂತ್ಯೋತ್ಸವ ಜಿಲ್ಲಾ ಸಮಿತಿ ಸಂಚಾಲಕ ಚಿದಾನಂದ ಬೈಲಾಡಿ, ಒಕ್ಕಲಿಗ ಸ್ವಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ ತಾಲೂಕು ಸಹ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ ಸಹಿತ ಸುಳ್ಯ, ವಿಟ್ಲ, ಉಡುಪಿ ಮತ್ತು ಪುತ್ತೂರಿನ ಪ್ರಮುಖುರು ಉಪಸ್ಥಿತರಿದ್ದರು.