








ಆಲಂಕಾರು: ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಎಸ್. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಂತಿವನ ಟ್ರಸ್ಟ್ ಮತ್ತು ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಹಾಗೂ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಜ್ಞಾನ ವಿಕಾಸ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಶರವೂರು ನಗ್ರಿ ಶಾಲಿನಿ ಹಾಗೂ ಶಿವಾನಂದ ದಂಪತಿ ಪುತ್ರಿ.













