ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ

0

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನೀಡುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರು ಸುದ್ದಿ ಬಿಡುಗಡೆ ವರದಿಗಾರರಾಗಿದ್ದ ಇಬ್ರಾಹಿಂ ಖಲೀಲ್‌ರವರು ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಈ ಪ್ರಶಸ್ತಿ ನೀಡಲಾಗಿದೆ. ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಮತ್ತು ಜೋಹರಾಬಿ ದಂಪತಿಯ ಪುತ್ರರಾಗಿರುವ ಇವರು ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯಲ್ಲಿ ವಿಡಿಯೋ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here