




ಪುತ್ತೂರು:ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿ, ಟೈಲರ್, ಕೆಮ್ಮಿಂಜೆ ಶ್ರೀಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಮೋನಪ್ಪ ಗೌಡ(64 ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಜ.16ರಂದು ಸ್ವಗೃಹದಲ್ಲಿ ನಿಧನರಾದರು.









ಸುಮಾರು 40 ವರ್ಷಗಳಿಂದ ಕೆಮ್ಮಿಂಜೆಯ ಮರೀಲ್ನಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದ ಇವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇವರು ಕೆಮ್ಮಿಂಜೆ ಶ್ರೀಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು, ದೇವಸ್ಥಾನದ ದೈವ ಪಾತ್ರಿಯಾಗಿ ಗೌಡ ಸಮುದಾಯದ ಊರ ಗೌಡರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ ಹಾಗೂ ಸಹೋದರ ರಾಧಾಕೃಷ್ಣರವರನ್ನು ಅಗಲಿದ್ದಾರೆ.







