ಪುತ್ತೂರು:ಕಳೆದ ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದ್ದ, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ದೋಷಾರೋಪಣಾ ಪಟ್ಟಿ ಸಲ್ಲಿಸಿದೆ. ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 240 ಸಾಕ್ಷಿಗಳ ಹೇಳಿಕೆ ಇರುವ, ಒಟ್ಟು 1500 ಪುಟಗಳ ಚಾರ್ಜ್ ಶೀಟ್ ಅನ್ನು ಎನ್ಐಎ ಅಧಿಕಾರಿಗಳು ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ 6 ಮಂದಿಯ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ತಲೆಮರೆಸಿಕೊಂಡಿರುವ 6 ಜನ ಆರೋಪಿಗಳ ಪತ್ತೆಗಾಗಿ ಈಗಾಗಲೇ ಎನ್ಐಎ ಬಹುಮಾನ ಘೋಷಿಸಿದೆ.