ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ಪ್ರಥಮ ಪ್ರತಿಷ್ಠಾ ವರ್ಧಂತಿ ಹಾಗೂ ಎಲಿಯ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ದೇವಳದ ವ್ಯವಸ್ಥಾಪನ ಸಮಿತಿ, ಎಲಿಯ ಜಾತ್ರಾ ಸಮಿತಿ ಹಾಗೂ ಊರ ಕೂಡುಕಟ್ಟಿನ ಯಜಮಾನತ್ವದಲ್ಲಿ ಫೆ.6 ಮತ್ತು 7ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜ.23 ರಂದು ಶ್ರೀ ಎಲಿಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕ ನಾಗೇಶ ಕಣ್ಣಾರಾಯರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಗೌರವ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಸಂಚಾಲಕ ಲಕ್ಷ್ಮೀನಾರಾಯಣ ಕಡಂಬಳಿತ್ತಾಯ, ಅಧ್ಯಕ್ಷ ಶಿವರಾಮ ರೈ ಸೊರಕೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಗೌಡ ಎಲಿಯ, ಜಾತ್ರಾ ಸಮಿತಿ ಕೋಶಾಧಿಕಾರಿ ಮಜಿತ್ ಸುವರ್ಣ ಸೊರಕೆ, ಕಾರ್ಯದರ್ಶಿ ರಜನಿಕಾಂತ ಬಾಳಯ, ಪವಿತ್ರಪಾಣಿ ಬಾಲಕೃಷ್ಣ ಮುಡಂಬಡಿತ್ತಾಯ ಸೊರಕೆ, ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಲಲಿತಾ ಶಿವಪ್ಪ ಗೌಡ, ಅಶೋಕ್ ರೈ ಸೊರಕೆ, ಜಾತ್ರಾ ಸಮಿತಿ ಉಪಾಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಸಾಗು, ಮಿತ್ರಂಪಾಡಿ ಜಯರಾಮ ರೈ, ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಕೋಶಾಧಿಕಾರಿ ಪ್ರಸನ್ನ ರೈ ಮಜಲುಗದ್ದೆ, ಸದಸ್ಯ ಪದ್ಮಯ್ಯ ನಾಯ್ಕ ನೆಕ್ಕಿಲು, ದೈವಗಳ ನೇಮೋತ್ಸವ ಸಮಿತಿ ಸದಸ್ಯ ಸುಂದರ ಕಟ್ಟತ್ತಡ್ಕ, ಗೌರವ ಸಲಹೆಗಾರರಾದ ಬಿ.ವಿ ಸೂರ್ಯನಾರಾಯಣ, ಭಾಸ್ಕರ ರೈ ನಂಜೆ, ಬೈಲುವಾರು ಸಮಿತಿಯ ಕೆದಂಬಾಡಿ ವಲಯದ ಜಯಾನಂದ ರೈ ಮಿತ್ರಂಪಾಡಿ, ಆನಂದ ರೈ ಮಠ, ಅಲ್ಲದೆ ದೇವಪ್ಪ ಗೌಡ ಅಂಙತ್ತಡ್ಕ, ಬಾಲಕೃಷ್ಣ ರೈ ನೇರೋಳ್ತಡ್ಕ, ಮೀರಾ ಎಸ್.ರೈ ಸೇರಿದಂತೆ ಹಲವು ಮಂದಿ ಭಕ್ತರು ಉಪಸ್ಥಿತರಿದ್ದರು.
ಫೆ.6 ಮತ್ತು 7 ಎಲಿಯ ಜಾತ್ರೆ
ಜ.31ರಂದು ಬೆಳಿಗ್ಗೆ 11 ಗಂಟೆಗೆ ಗೊನೆ ಮುಹೂರ್ತ ನಡೆಯಲಿದೆ. ಫೆ.5 ರಂದು ಬೆಳಿಗ್ಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ, 6 ರಂದು ಬೆಳಿಗ್ಗೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳು, ರಾತ್ರಿ ಜಾತ್ರಾ ಮಹೋತ್ಸವ, ಶ್ರೀ ಭೂತ ಬಲಿ, ಬಟ್ಟಲು ಕಾಣಿಕೆ ಇತ್ಯಾದಿ ನಡೆದು ಅನ್ನಸಂತರ್ಪಣೆ, 7 ರಂದು ಸಂಜೆಯಿಂದ ದೈವಗಳ ಭಂಡಾರ ತೆಗೆದು ರಾತ್ರಿ ದೈವಗಳ ನೇಮೋತ್ಸವ ನಡೆಯಲಿದೆ.