ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಹಾಗೂ MRPL ಮಂಗಳೂರು ಇದರ CSR ನಿಧಿಯ ಜಂಟಿ ಸಹಯೋಗದೊಂದಿಗೆ ವಿವೇಕಾನಂದ ಕ್ಯಾಂಪಸ್‌ನ ತ್ಯಾಜ್ಯನೀರು ಶುದ್ಧೀಕರಣ ಘಟಕ ಉದ್ಘಾಟನೆಗೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟನೆಯನ್ನು ನೆರವೇರಿಸಿ ಸದ್ಯ ದೇಶದಲ್ಲಿ ನೀರಿನ ದುರ್ಬಳಕೆ, ಇಲೆಕ್ಟ್ರಾನಿಕ್ಸ್ ತ್ಯಾಜ್ಯ ಹಾಗೂ ಘನತ್ಯಾಜ್ಯದ ನಿರ್ವಹಣೆಯ ಬಗ್ಗೆ ಮಾತನಾಡಿದರು. ತ್ಯಾಜ್ಯನೀರನ್ನು ಸಂಸ್ಕರಿಸಿ ಪುನ: ಮರುಬಳಕೆಯನ್ನು ಮಾಡುವ ಘಟಕಕ್ಕೆ ಸಹಕರಿಸಿದ MRPL ನ ಅಧಿಕಾರಿಗಳನ್ನು ಹಾಗೂ ಪಾಲಿಟೆಕ್ನಿಕ್‌ನ ಸಿಂದಿಗಳನ್ನು ಸ್ಮರಿಸಿಕೊಂಡರು.
ಪುತ್ತೂರು ನಗರಸಭೆಯ ಅಧ್ಯಕ್ಷ ಕೆ. ಜೀವಂದರ್ ಜೈನ್ ಅತಿಥಿಗಳಾಗಿ ಆಗಮಿಸಿ ನಗರ ಸಭೆಯು ಮಾಡಬೇಕಾದ ಕೆಲಸಕಾರ್ಯಗಳನ್ನು ಪುತ್ತೂರು ವಿದ್ಯಾವರ್ಧಕ ಸಂಘವು ಮಾಡಿದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. MRPL ನ ಸೀನಿಯರ್ ಮೇನೆಜರ್ ಸಂಪತ್ ರೈಯವರು CSR ನಿಧಿ ಕೊಡುವ ಬಗೆಗೆ ಹಾಗೂ ಅದರ ಸದ್ಬಳಕೆಯ ಬಗ್ಗೆ ತಿಳಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ. ಕೃಷ್ಣ ಭಟ್, ಕೋಶಾಧಿಕಾರಿ ಅಚ್ಚುತ ನಾಯಕ್, ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಸದಸ್ಯರುಗಳು, ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರುಗಳು, ಪ್ರಾದ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷ ಬಂಗಾರಡ್ಕ ವಿಶ್ವೇಶ್ವರ ಭಟ್‌ರವರು ತ್ಯಾಜ್ಯನೀರು ಶುದ್ಧೀಕರಣ ಘಟಕದ ಬಗ್ಗೆ ವಿವರವಾಗಿ ಪ್ರಸ್ತಾಪಿಸಿರು. ಸಂಚಾಲಕ ಮಣಿಲ ಮಹಾದೇವ ಶಾಸ್ತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಂಶುಪಾಲ ಚಂದ್ರಕುಮಾರ್ ಧನ್ಯವಾದವನಿತ್ತರು. ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕ ಗುರುಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.