




ಪುತ್ತೂರು:ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.




2013ರಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜಸ್ಥಾನ ಮೂಲದ ಗಂಗಾಪುರ್ ತಾಲೂಕಿನ ಭಗವಾನ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆರೋಪಿ ಭಗವಾನ್ ಸಿಂಗ್ ಬಳಿಕದ ದಿನಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಆತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಜ.17ಕ್ಕೆ ಆರೋಪಿ ವಿಟ್ಲದ ಕೋಡಪದವಿಗೆ ಬರುವ ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ, ಜಗದೀಶ್ ಮತ್ತು ಕಾನ್‌ಸ್ಟೇಬಲ್ ಕಿರಣ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.










