ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಮತ್ತು ಕನ್ನಡ ಮಾಧ್ಯಮ ಶಾಲೆ ವಿವೇಕಾನಂದ ಬಿ. ಎಡ್ ಕಾಲೇಜುನರೇಂದ್ರ ಪದವಿಪೂರ್ವ ಕಾಲೇಜು ವಿವೇಕನಗರತೆಂಕಿಲಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ 74ನೇ ಗಣರಾಜ್ಯೋತ್ಸವವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ  ಆಚರಿಸಲಾಯಿತು.

 ನಿವೃತ್ತ ಸೈನಾಧಿಕಾರಿ  ಕಿಶೋರ್ ಮಾವಜಿ ಅವರು  ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸೂಕ್ತವಾಗಿ ನಿರ್ವಹಿಸುವ ಅಗತ್ಯವಿದೆ. ಮಾತ್ರವಲ್ಲದೇ ಸಂವಿಧಾನದ ಗೌರವ ರಕ್ಷಣೆ ಮತ್ತು ದೇಶ ರಕ್ಷಣೆ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು  ಹೇಳಿದರು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ  ಅಚ್ಯುತ್ ನಾಯಕ್  ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಲ್ಕೂ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರುಸಂಚಾಲಕರುಸದಸ್ಯರುಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳುಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳುಬಿ.ಎಡ್ ವಿದ್ಯಾರ್ಥಿ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಂದೇ ಮಾತರಂ’ ಧ್ವಜಗೀತೆ ಮತ್ತು ರಾಷ್ಟ್ರಗೀತೆಯನ್ನು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಡಿದರು. ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಸಲಾಯಿತು. ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ನಿರ್ವಹಿಸಿದರು.

ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ  ಡಾ. ಶೋಭಿತಾ ಸತೀಶ್ ಸ್ವಾಗತಿಸಿನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನುಭೋಗ್ ವಂದಿಸಿದರು. ಕೃತಿಕಾ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here