ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ಮತ್ತು ಬೈಂದೂರು ಪ್ರಭಾಕರ್ ರಾವ್ ಮೆಮೊರಿಯಲ್ ಟ್ರಸ್ಟ್ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಮಂಗಳೂರು, ದ.ಕ ಜಿಲ್ಲಾ ವೆನ್‌ಲಾಕ್ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು, ಕೆ.ಎಂ.ಸಿ ಮಂಗಳೂರು ಮತ್ತು ಸರಕಾರಿ ಆಸ್ಪತ್ರೆ ಪುತ್ತೂರು ಇವರ ಸಹಯೋಗದಲ್ಲಿ ಎ.12 ರಂದು ಪೂ. ಗಂಟೆ 9.30 ರಿಂದ ಮಧ್ಯಾಹ್ನ 1.30ರ ತನಕ ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಜರಗಲಿದೆ.
ದಾಖಲಾತಿ:
ಪೂರ್ವಾಹ್ನ ಗಂಟೆ 8.30ರಿಂದ ಗಂಟೆ 11.30ರ ತನಕ ಮೊದಲು ಬಂದ ೨೫೦ ನೇತ್ರ ರೋಗಿಗಳಿಗೆ ಮಾತ್ರ ಲಭ್ಯ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಕಣ್ಣು ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರನ್ನು ಅದೇ ದಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುವುದು. ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್‌ಗಳ ಪ್ರತಿಯೊಂದಿಗೆ ಒಬ್ಬ ಸಹಾಯಕರೊಂದಿಗೆ ಬರಬೇಕು. ಚಿಕಿತ್ಸೆ ಪೂರ್ಣ ಉಚಿತವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.