ಪುತ್ತೂರು: ಸಾಮಾಜಿಕ, ಸಾಹಿತ್ಯಿಕ, ಧಾರ್ಮಿಕ ಮತ್ತು ರಾಜಕೀಯವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಕೃಷಿ ಕ್ಷೇತ್ರದ ಸಾಧನೆಗಾಗಿ ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಿನ್ನದ ಪದಕ ವಿಜೇತ ಕೃಷಿಕ ಕಡಮಜಲು ಸುಭಾಸ್ ರೈಯವರು ತನ್ನ 71 ನೇ ಹುಟ್ಟುಹಬ್ಬವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ದಂಪತಿಯ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಫೆ. 6 ರಂದು ಮೂಡಬಿದ್ರೆಯ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಸರಳವಾಗಿ ಆಚರಿಸಿಕೊಂಡರು. ಅಯ್ಯಪ್ಪ ಭಕ್ತರಾದ ಸುದರ್ಶನ್ ರವರು ಪೂಜಾ ಕಾರ್ಯ ನೆರವೇರಿಸಿ ಕಡಮಜಲು ದಂಪತಿಗೆ ಪ್ರಸಾದ ನೀಡಿ, ಫಲವಸ್ತು ನೀಡಿ, ಶಾಲು ಹೊದೆಸಿ ಗೌರವಿಸಿದರು.
ಅಯ್ಯಪ್ಪ ಸನ್ನಿಧಿಯಲ್ಲಿ ಪ್ರಾರ್ಥಿಸಿದ ಕಡಮಜಲುರವರು ಕಳೆದ ವರ್ಷ ಸುದರ್ಶನ್ ಮೂಡಬಿದ್ರೆ ದಂಪತಿ ಜೊತೆ ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡದ್ದನ್ನು ನೆನಪಿಸಿಕೊಂಡು ಮುಂದಿನ ವರ್ಷಗಳಲ್ಲಿಯೂ ತಮ್ಮ ಹುಟ್ಟುಹಬ್ಬವನ್ನು ಒಟ್ಟಾಗಿ ಆಚರಿಸಲು ದೇವರ ಅನುಗ್ರಹವಿರಲಿ ಎಂದರು.
ಬಳಿಕ ಕರಿಂಜೆ ಶ್ರೀ ಲಕ್ಷ್ಮೀಸತ್ಯನಾರಾಯಣ ವೀರಾಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಸುಭಾಸ್ ರೈ ದಂಪತಿಯನ್ನು ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು. ಸಿರಿಕಡಮಜಲು ಕೃಷಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಶ್ರೀಗಳು ಕೃಷಿ ಸಂಸ್ಕೃತಿ ದೇಶದ ಸಂಸ್ಕೃತಿ. ಇದನ್ನು ಉಳಿಸಿ ಬೆಳೆಸುವ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.