ಪುತ್ತೂರು : ದ.ಕ.ಹಾಲು ಒಕ್ಕೂಟದಿಂದ ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ ರೂ.1.00 ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.ಫೆ.24ರಂದು ನಡೆದ ಒಕ್ಕೂಟದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೊರೋನಾ ಹಿನ್ನಲೆಯಲ್ಲಿ ದ.ಕ.ಹಾಲು ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದ್ದ ಕಾರಣ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ನೀಡುವ ಹಾಲಿನ ಖರೀದಿ ದರವನ್ನು ಕಡಿಮೆ ಮಾಡಲಾಗಿತ್ತು. ಪ್ರಸ್ತುತ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರನೆಯಾಗಿರುವ ಹಿನ್ನಲೆಯಲ್ಲಿ ಪ್ರತೀ ಲೀ. ಹಾಲಿಗೆ ರೂ.೧.೦೦ ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದರ ನಿಗದಿಪಡಿಸಿದೆ. ಮಾ.೧ರಿಂದ ಎ.೩೦ ರವರೆಗೆ ಅನ್ವಯವಾಗುವಂತೆ ಒಕ್ಕೂಟವು ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ನೀಡುವ ಪ್ರತೀ ಲೀ. ಹಾಲಿಗೆ ರೂ.೧.೦೦ ರಂತೆ ಹೆಚ್ಚಿಸಿ ಹಾಲು ಉತ್ಪಾದಕರಿಂದ ಖರೀದಿಸುವ ಸರಾಸರಿ ಗುಣಮಟ್ಟದ ಬೆಲೆ(ಶೇ.೩೫ ಫ್ಯಾಟ್ ಮತ್ತು ಶೇ.೮.೫ ಎಸ್ಎನ್ಎಫ್) ರೂ.೩೦ ನಿಗದಿಪಡಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.