ಫೆ. 3 – 7: ಕಣಿಯೂರು‌ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

  • ಸುಂದರ ವಿನ್ಯಾಸದಲ್ಲಿ ಗರ್ಭಗುಡಿ, ನಮಸ್ಕಾರ ಮಂಟಪದೊಂದಿಗೆ ದೇಗುಲ ನಿರ್ಮಾಣ: ಕಣಿಯೂರು ಶ್ರೀ

ವಿಟ್ಲ:  ಪುರಾಣ ಪ್ರಸಿದ್ಧ ಕಣ್ವ ಮುನಿಗಳ ಸಂಕಲ್ಪಿತ ಶ್ರೀ ಕಣಿಯೂರು ಕ್ಷೇತ್ರದಲ್ಲಿ ಸುಮಾರು 40 ವರ್ಷಗಳ ಹಿಂದೆ ಪುಟ್ಟ ಶ್ರೀಚಾಮುಂಡೇಶ್ವರಿ ಗುಡಿ ಸ್ಥಾಪನೆಯಾಗಿತ್ತು. 2001ರಲ್ಲಿ ದೇವಾಲಯದ ಪುನರ್ ನಿರ್ಮಾಣ ಪುನರ್ ಪ್ರತಿಷ್ಠೆಯಾಗಿತ್ತು. ಇದೀಗ ಮೂರನೆಯ ಬಾರಿ ಆಗಮ ಶಾಸ್ತ್ರ ಪ್ರಕಾರ ದೇಗುಲ ನಿರ್ಮಾಣಗೊಂಡಿದ್ದು, ಫೆ. 3 ರಿಂದ 7 ರ ತನಕ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಐದಾರು ವರ್ಷಗಳಿಂದ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸುಂದರ ವಿನ್ಯಾಸದಲ್ಲಿ ಗರ್ಭಗುಡಿ, ನಮಸ್ಕಾರ ಮಂಟಪದೊಂದಿಗೆ ದೇಗುಲ ನಿರ್ಮಾಣಗೊಂಡಿದೆ ಎಂದು ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು.

ಅವರು ಜ.23ರಂದು ಶ್ರೀ ಕ್ಷೇತ್ರದಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಬಗ್ಗೆ ವಿವರಣೆ ನೀಡಿದರು. ಪ್ರತಿಯೊಬ್ಬ ಭಕ್ತಾದಿಗಳು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸಹಭಾಗಿಗಳಾಗಿ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಂತ ನಡುಬೈಲುರವರು  ಮಾತನಾಡಿ ಫೆ.3ರಂದು ಮಧ್ಯಾಹ್ನ ೨.೩೦ಕ್ಕೆ ಹಸಿರುವಾಣಿ ಶೋಭಾಯಾತ್ರೆ ಕನ್ಯಾನ ಕುಟ್ಟಿತ್ತಡ್ಕ ಶ್ರೀ ವಿಷ್ಣುಮೂರ್ತಿ ಭಜನಾಮಂದಿರದಿಂದ ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಂಜೆ 5 ಗಂಟೆಗೆ ಉಗ್ರಾಣ ಮುಹೂರ್ತ ನಡೆಯಲಿದೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ, ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಮಾತಾನಂದಮಯಿ ಆಶೀರ್ವಚನ ನೀಡಲಿದ್ದಾರೆ. ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಫೆ. 4ರಂದು ಸಂಜೆ ೫ ಗಂಟೆಗೆ ತಂತ್ರಿಗಳ ಆಗಮನ, ವಾಸ್ತುಶಿಲ್ಪಿಗಳ ಆಗಮನದ ಬಳಿಕ ನಾನಾ ವೈದಿಕ ಕಾರ್ಯಗಳು ನಡೆಯಲಿವೆ. ಫೆ. 5 ರಂದು ಸಂಜೆ. 5.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ, ಕಣಿಯೂರು ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಸೇವಾ ಟ್ರಸ್ಟ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ.

ಫೆ. 6 ರಂದು ಬೆಳಗ್ಗೆ ತಂತ್ರಿಗಳಿಂದ ವೈದಿಕ ವಿಧಿವಿಧಾನಗಳು ನಡೆದ ಬಳಿಕ ೯.೨೮ರ ಸುಮೂಹೂರ್ತದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠೆ, ಪ್ರತಿಷ್ಠಾ ಕಲಾಶಭಿಷೇಕ ಪೂಜೆ, ಗುಳಿಗ ಪ್ರತಿಷ್ಠೆ ಕಲಶಾಭಿಷೇಕ, ವಿಶೇಷ ದ್ರವ್ಯ ಕಲಶ ಸಹಿತಬ್ರಹ್ಮ ಕಲಶಾಭಿಷೇಕ, ಶಿಖರ ಪ್ರತಿಷ್ಠೆ, ಶಿಖರ ಕಲಶಾಭಿಷೇಕ, ಪರಿವಾರ ದೈವಸ್ಥಾನಗಳಲ್ಲಿ ಕಲಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ ನಡೆಯಲಿದೆ.

ಮಧ್ಯಾಹ್ನ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ, ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಕಣಿಯೂರು ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಟೀಲು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ವಿಟ್ಲ ಅರಮನೆಯ ಬಂಗಾರು ಅರಸರು ಇನ್ನಿತರ ಗಣ್ಯರು ಭಾಗವಹಿಸಿಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ವಹಿಸಲಿದ್ದಾರೆ. ಫೆ. 7 ರಂದು ಬೆಳಗ್ಗೆ 10.30 ಕ್ಕೆ ಚಂಡಿಕಾ ಯಾಗ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ, ಕಣಿಯೂರು ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಶ್ರೀಕ್ಷೇತ್ರ ಕಟೀಲು ಕಮಲಾದೇವಿ ಪ್ರಸಾದ ಅಸ್ರಣ್ಣ, ಕುಕ್ಕಾಜೆ ಶ್ರೀಕಾಳಿಕಾಂಬಾ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಕೃಷ್ಣ ಗುರೂಜಿ ಭಾಗವಹಿಸಲಿದ್ದು, ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅನೆಯಾಲ ಮಂಟಮೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಮಾತನಾಡಿ ಪೂಜ್ಯ ಸ್ವಾಮೀಜಿಯವರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯುವ ಪುಣ್ಯ ಕಾರ್ಯದಲ್ಲಿ ಪಾಲು ಪಡೆಯುವ ಸುಯೋಗ ಬಂದಿದೆ. ಇದನ್ನು ಸದ್ವನಿಯೋಗಿಸಬೇಕಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚಾಮುಂಡೇಶ್ವರಿ ದೇವೀ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಅನೆಯಾಲ ಮಂಟಮೆ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪಿ.ಲಿಂಗಪ್ಪ ಗೌಡ, ಬ್ರಹ್ಮಕಲಶೋತ್ಸವ ಮಿತಿ ಉಪಾಧ್ಯಕ್ಷ ಎಸ್.ಬಿ.ಕಣಿಯೂರು, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕಣಿಯೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here