ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೈನಂದಿನ ಅನ್ನದಾನಕ್ಕೆ ಅಬುದಾಬಿಯಲ್ಲಿ ನೆಲಸಿರುವ ಮಿತ್ರಂಪಾಡಿ ಜಯರಾಮ ರೈಯವರು ಧನಸಹಾಯ ರೂ.51000 ದ ಚೆಕ್ನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದರಿಗೆ ಹಸ್ತಾಂತರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ಜಯಕುಮಾರ್ ರೈ ಮಿತ್ರಂಪ್ಪಾಡಿ ಹಾಗೂ ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು.