ಪುತ್ತೂರು: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪುತ್ತೂರು ಇದರ ಸಹಯೋಗದಲ್ಲಿ ರಾಷ್ಟ್ರೀಯ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮದ ಅಂಗವಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ “ಆರೋಗ್ಯ ಸುರಕ್ಷತಾ ಜಾಗೃತಿ” ಕಾರ್ಯಾಗಾರ ನಡೆಯಿತು.
ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಉಪಯುಕ್ತವಾಗುವ ಈ ಮಾಹಿತಿ ಕಾರ್ಯಾಗಾರದ ಕುರಿತು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪುತ್ತೂರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿ ನಿಶಾ ಮತ್ತು ರಾಷ್ಟ್ರೀಯ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮದ ಆಪ್ತ ಸಮಾಲೋಚಕರಾದ ಸುಶ್ಮಿತಾರವರು ವಿದ್ಯಾರ್ಥಿನಿಯರಿಗೆ ಆರೋಗ್ಯ ಸುರಕ್ಷತೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ತ್ರೀ ಸಂಬಂಧಿ ಆರೋಗ್ಯ ಸಮಸ್ಯೆಗಳು ಮತ್ತು ಅದಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಸಂವಾದ ನಡೆಸಲಾಯಿತು.
ಕಾರ್ಯಾಗಾರವನ್ನು ನಡೆಸಿಕೊಟ್ಟ ನಿಶಾ ಮತ್ತು ಸುಶ್ಮಿತಾ ರವರಿಗೆ ವಿದ್ಯಾಮಾತಾ ಅಕಾಡೆಮಿಯ ಪರವಾಗಿ ವಿದ್ಯಾರ್ಥಿನಿಯರು ಸ್ಮರಣಿಕೆ ನೀಡಿ ಗೌರವಿಸಿದರು.