ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಚಪ್ಪರ ಮುಹೂರ್ತ ಫೆ.6 ರಂದು ಬೆಳಿಗ್ಗೆ ನಡೆಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರೂ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ವೇ ಮೂ ವಿ.ಎಸ್ ಭಟ್ ಅವರು ಭೂಮಿ ಪೂಜೆಯೊಂದಿಗೆ ಚಪ್ಪರ ಮುಹೂರ್ತ ಮಾಡಿ ತೆಂಗಿನ ಕಾಯಿ ಒಡೆದು ಕಾರ್ಯಕ್ರಮದ ಸಿದ್ದತಾ ಕೆಲಸಕ್ಕೆ ಚಾಲನೆ ನೀಡಿದರು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ, ಪ್ರಮುಖರಾದ ಅಚ್ಚುತ ನಾಯಕ್ ಭೂಮಿಗೆ ಪ್ರಥಮ ಗುದ್ದಲಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ ಮಾಜಿ ಸದಸ್ಯ ಉಮೇಶ್ ಶೆಣೈ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಚಾಲಕ ವಸಂತ ಸುವರ್ಣ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸತೀಶ್ ರೈ, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿಶ್ವನಾಥ ಕುಲಾಲ್, ಸಂತೋಷ್ ಬೋನಂತಾಯ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಸಂಪತ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಮುಖರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ಮತ್ತು ಸಂಜೀವ ಪ್ರಭು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಶ್ರೀಕೃಷ್ಣ ಜೆ ರಾವ್ ಅವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.