ರಾಮಕುಂಜ: ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಫೆ.5ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ನಡೆಯಿತು.
ಬೆಳಿಗ್ಗೆ ಬಲಿ ಹೊರಟು ಉತ್ಸವ, 48 ತೆಂಗಿನಕಾಯಿಗಳ ಶ್ರೀ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ ನಡೆಯಿತು. ರಾತ್ರಿ ಬಲಿ ಹೊರಟು ಉತ್ಸವ ಬಳಿಕ ಬ್ರಹ್ಮರಥೋತ್ಸವ ನಡೆಯಿತು. ಬಳಿಕ ಶ್ರೀ ಭೂತಬಲಿ, ಶಯನೋತ್ಸವ ನಡೆಯಿತು. ದೇವಸ್ಥಾನದ ಪವಿತ್ರಪಾಣಿ ನರಹರಿ ಉಪಾಧ್ಯಾಯ ಈರಕೀಮಠ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಸದಸ್ಯರಾದ ಅರ್ಚಕ ಅನಂತ ಉಡುಪ, ರಮೇಶ್ ರೈ ರಾಮಜಾಲು, ಯೋಗೀಶ್ ಕುಲಾಲ್ ಅಜ್ಜಿಕುಮೇರು, ಜನಾರ್ದನ ಗೌಡ ಬಾಂತೊಟ್ಟು, ಗಿರಿಯಪ್ಪ ಗೌಡ ಆನ, ಸಂಜೀವ ಶಾರದಾನಗರ, ಶೈಲಜಾ ಆಳ್ವಗುತ್ತು, ವಿಮಲಾ ಕರುಣಾಕರ ಆರಿಂಜ, ಉತ್ಸವ ಸಮಿತಿ ಗೌರವಾಧ್ಯಕ್ಷ ಮಾಧವ ಆಚಾರ್ಯ ಇಜ್ಜಾವು, ಅಧ್ಯಕ್ಷ ರಮೇಶ ಉಪಾಧ್ಯಾಯ ಕಲ್ಲೇರಿ, ಕಾರ್ಯದರ್ಶಿ ಸತೀಶ್ ಭಟ್ ಎಂ, ಉಪಾಧ್ಯಕ್ಷರಾದ ದಿವಾಕರ ರಾವ್ ಪಂಚವಟಿ, ಧರ್ಮಪಾಲ ರಾವ್ ಕಜೆ, ರಾಮಭಟ್ ಬೃಂದಾವನ, ತಿಮ್ಮಪ್ಪ ಗೌಡ ಆನ ಸೇರಿದಂತೆ ಸಮಿತಿ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಗವದ್ಬಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.