ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ.8 ರಿಂದ 10 ರ ತನಕ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಫೆ.8 ರಂದು ಸಂಜೆ ರಕ್ಷೋಘ್ನ ಹೋಮ, ವಾಸ್ತು ಹೋಮ ಸಹಿತ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.
ಫೆ.9 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ದಿ, ಕಲಶ ಪೂಜೆ, ಅನುಜ್ಞಾ ಕಲಶ ಪೂಜೆ, ಸಂಹಾತ ತತ್ವಹೋಮ, ತತ್ತ್ವಕಲಶಪೂಜೆ , ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶಪೂಜೆ, ಜೀವೋದ್ವಾಸನೆ, ಶಯ್ಯಾಪೂಜೆ, ರಾತ್ರಿ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.
ಫೆ. 10 ರಂದು ಬೆಳಿಗ್ಗೆ ಮಹಾಗಣಪತಿ ಹೋಮ ನಡೆದು ಬಳಿಕ 9.24 ರಿಂದ 10.30 ರ ತನಕ ನಡೆಯುವ ಮೀನ ಲಗ್ನ ಶುಭ ಮುಹೂರ್ತದಲ್ಲಿ ಬಾಲಾಲಯ ಪ್ರತಿಷ್ಠೆ, ಜೀವಕಲಶಾಭಿಷೇಕ ನಡೆಯಲಿದೆ.
ಸಭಾ ಕಾರ್ಯಕ್ರಮ: ಫೆ.10 ರಂದು ಬೆಳಿಗ್ಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಪ್ರಜ್ವಲನೆ ನಡೆಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ವಿಶ್ವನಾಥ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಭಾಗವಹಿಸಲಿದ್ದಾರೆ. ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ದಾರ ಸಮಿತಿಯ ಪ್ರಕಟಣೆ ತಿಳಿಸಿದೆ.