ಬ್ಯಾಂಕ್‌ಗೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಪುತ್ತೂರು: ಕರ್ಣಾಟಕ ಬ್ಯಾಂಕ್‌ಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಕಂಬಳಬೆಟ್ಟು ಶಾಂತಿನಗರ ನಿವಾಸಿ ಅಬ್ದುಲ್ ನಝೀರ್ ಬಂಧಿತ ಆರೋಪಿ. 2022ರಲ್ಲಿ ಪುತ್ತೂರಿನ ಕರ್ಣಾಟಕ ಬ್ಯಾಂಕ್‌ಗೆ ಜಾಗದ ವಿಚಾರಕ್ಕೆ ಸಂಬಂಧಿಸಿ ವಂಚನೆ ಎಸಗಿರುವ ಬಗ್ಗೆ ಅಬ್ದುಲ್ ನಝೀರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಫೆ. 7ರಂದು ಕಂಬಳಬೆಟ್ಟುವಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here