ಪುತ್ತೂರು: ಆರೋಗ್ಯ ಭಾಗ್ಯದಾಯಕ, ಸಂತಾನ ಫಲದಾಯಕ ಎಂದೇ ಪ್ರಸಿದ್ಧಿ ಪಡೆದುಕೊಂಡಿರುವ ಹಾಲು ಪಾಯಸದಂತಹ ಹರಕೆಗೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬಂದಿರುವ ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ಪ್ರಥಮ ಪ್ರತಿಷ್ಠಾ ವರ್ಧಂತಿ ಹಾಗೂ ಉತ್ಸವ ‘ಎಲಿಯ ಜಾತ್ರೆ’ಯ ಅಂಗವಾಗಿ ಶ್ರೀ ಕ್ಷೇತ್ರದ ದೈವಗಳಿಗೆ ವಿಜೃಂಭಣೆಯ ನೇಮೋತ್ಸವ ಫೆ.05ರಂದು ಜರಗಿತು.
ವಿಶೇಷವಾಗಿ ಶ್ರೀ ಕ್ಷೇತ್ರದ ದೈವಗಳಾದ ಪಿಲಿಭೂತ, ರಕ್ತೇಶ್ವರಿ, ಶಿರಾಡಿ ದೈವ ಕುಪ್ಪೆ ಪಂಜುರ್ಲಿ ದೈವಗಳಿಗೆ ನೇಮೋತ್ಸವ ಜರಗಿತು. ಫೆ.7 ರಂದು ಸಂಜೆ ಶ್ರೀ ದೇವಳದ ಪರಿವಾರ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಅಡ್ಕರೆಗುಂಡಿಯಿಂದ ದೇವಳದ ಕಾವಲು ದೈವ ಗುಳಿಗನ ಭಂಡಾರವನ್ನು ಮೆರವಣಿಗೆಯೊಂದಿಗೆ ದೇವಳಕ್ಕೆ ತರುವ ಕಾರ್ಯಕ್ರಮ ನಡೆಯಿತು. ಈ ಮೆರವಣಿಗೆಯಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಭಂಡಾರ ತಂದ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ದೈವದ ಗಂಧ ಪ್ರಸಾದದೊಂದಿಗೆ ಅನ್ನ ಪ್ರಸಾದ ಸ್ವೀಕರಿಸುವ ಮೂಲಕ ದೈವದ ಕೃಪೆಗೆ ಪಾತ್ರರಾದರು. ರಾತ್ರಿ 9 ಗಂಟೆಯ ಬಳಿಕ ಶ್ರೀ ದೈವಗಳಿಗೆ ವಿಜೃಂಭಣೆಯ ನೇಮೋತ್ಸವ ಜರಗಿತು. ಸರ್ವೆ, ಮುಂಡೂರು, ಕೆದಂಬಾಡಿ, ಕೆಯ್ಯೂರು ಗ್ರಾಮದ ಭಕ್ತಾದಿಗಳು ಸೇರಿದಂತೆ ಊರಪರವೂರ ನೂರಾರು ಭಕ್ತಾದಿಗಳು ಆಗಮಿಸಿ ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಗೌರವಾಧ್ಯಕ್ಷರುಗಳು, ಅಧ್ಯಕ್ಷರು, ಸಂಚಾಲಕರು, ಪದಾಧಿಕಾರಿಗಳು ಹಾಗೇ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಮಿತಿಯ ಸಂಚಾಲಕರು, ಸದಸ್ಯರುಗಳು, ಸರ್ವೆ, ಮುಂಡೂರು, ಕೆದಂಬಾಡಿ, ಕೆಯ್ಯೂರು ಗ್ರಾಮದ ಸಮಸ್ತ ಭಕ್ತಾಧಿಗಳು ಉಪಸ್ಥಿತರಿದ್ದರು.