ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ), ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ರಿಂದ 12 ರ ತನಕ 3 ದಿನಗಳ ಕಾಲ ನಡೆಯಲಿರುವ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಫೆ. 10ರದು ಚಾಲನೆ ನೀಡಲಾಗಿದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಿದರು. ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಹಕಾರದೊಂದಿಗೆ ನಿರ್ಮಿಸಲಾಗಿರುವ ಪಾರಂಪರಿಕ ಮಾದರಿ ಗ್ರಾಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಸುಬ್ರಮಣ್ಯ ಯಡಪಡಿತ್ತಾಯ ಅವರು ನೆರವೇರಿಸಿದರು. ಕೃಷಿಯಂತ್ರಗಳ ಮಳಿಗೆಗಳನ್ನು ಐಸಿಎಆರ್-ಸಿಪಿಸಿಆರ್ಐ ಕಾಸರಗೋಡು ಇದರ ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್ ಉದ್ಘಾಟಿಸಿದರು. ಕನಸಿನ ಮನೆ ವಿಭಾಗದ ಮಳಿಗಳ ಉದ್ಘಾಟನೆಯನ್ನು ಪುತ್ತೂರು ನಗರಸಭೆಯ ಅಧ್ಯಕ್ಷ ಜೀವಂಧರ್ ಜೈನ್ ನೆರವೇರಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷ ಶಂಕರನಾರಾಯಣ ಭಟದ ಖಂಡಿಗೆ, ಯಂತ್ರಮೇಳದ ಸಂಯೋಜಕ ರವಿಕೃಷ್ಣ.ಡಿ.ಕಲ್ಲಾಜೆ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್.ಎಮ್.ಕೃಷ್ಣಕುಮಾರ್, ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ, ದಯಾನಂದ ಹೆಗ್ಡೆ, ರಾಘವೇಂದ್ರ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಎಆರ್ ಡಿ ಎಫ್ ಕಾರ್ಯನಿರ್ವಹಣಾಧಿಕಾರಿ ಕೇಶವ ಭಟ್, ಕ್ಯಾಂಪ್ಕೋ ಜನರಲ್ ಮ್ಯಾನೇಜರ್ ರೇಶ್ಮಾ ಮಲ್ಯ, ನಿರ್ದೇಶಕರಾದ ಎಸ್. ಆರ್ ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ, ಶಂಬುಲಿಂಗ ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ ಟಿ.ಕೆ, ರಾಧಾಕೃಷ್ಣ ಕೆ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ ಪಿ, ರಾಘವೇಂದ್ರ ಎಚ್ ಎಂ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ನಿಮಾ, ನಿಶಾ, ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.