ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರ ಪುನಃಪ್ರತಿಷ್ಠೆ ಅಷ್ಟಬಂಧ

0

ವಿಟ್ಲ: ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ‌ ಬ್ರಹ್ಮಶ್ರೀ ವೇ.ಮೂ.ಕುಂಟುಕುಡೇಲು ರಘುರಾಮ ತಂತ್ರಿಯವರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಅಷ್ಟಬಂಧ ಪುನಃಪ್ರತಿಷ್ಠೆ ಫೆ.9ರಂದು ನಡೆಯಿತು.

ಫೆ.11ರಂದು ಬೆಳಗ್ಗೆ ಗಣಪತಿ ಹೋಮ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಪರಿವಾರ ದೇವರಿಗೆ ಕಲಶ ಪೂರಣಿ ಸಹಿತ ವೈದಿಕ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

ಸಾಯಂಕಾಲ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿರವರು ಆಶೀರ್ವಚನ ನೀಡಲಿದ್ದಾರೆ.

ಬನಾರಿ ಶ್ರೀ ಗುರು ಶಿವ ಕ್ಷೇತ್ರದ ಶ್ರೀ ದಾಮೋದರ ಸ್ವಾಮೀಜಿ ಹಾಗೂ ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಜಗನ್ನಾಥ್ ಶೆಣೈ, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿಟ್ಲ ಶ್ರವಣ ಜ್ಯುವೆಲ್ಸ್ ನ ಮಾಲಕರಾದ ಸದಾಶಿವ ಆಚಾರ್ಯ ಕೈಂತಿಲ, ಕೋಡಿಂಬಾಡಿ ರೈ ಎಸ್ಟೇಟ್ ನ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಸಹಿತ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ. ರಾತ್ರಿ 8ಗಂಟೆಯಿಂದ ಸಾಂಸ್ಕೃತಿಕ ಸೌರಭ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here