ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನ 2022-23 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಫೆ.15 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಡಲಿದ್ದಾರೆ. ಒಳಮೊಗ್ರು ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ಹಾಗು ಸರಕಾರದ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.