ನೆಲ್ಯಾಡಿ: ಬೆಂಗಳೂರಿನಿಂದ-ಮಂಗಳೂರು, ಕುಮಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಪಲ್ಟಿಯಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಫೆ.16ರಂದು ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ.
ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ ಹಾಗೂ ಮತ್ತಿಬ್ಬರನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಣ್ಣಪುಟ್ಟ ಗಾಯಗೊಂಡವರು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನೆಲ್ಯಾಡಿಯ ಮೂರು ಖಾಸಗಿ ಆಂಬುಲೆನ್ಸ್ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.