





ರಾಮಕುಂಜ: ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕೋಲಾರ ಪೊಲೀಸ್ ಕವಾಯತು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈಯವರು ನಾಲ್ಕು ಚಿನ್ನದ ಪದಕ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.



ಇವರು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ ಹಾಗೂ 4/100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನದೊಂದಿಗೆ ನಾಲ್ಕು ಚಿನ್ನದ ಪದಕ ಪಡೆದುಕೊಂಡು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ.27ರಿಂದ 30ರ ವರೆಗೆ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ರಾಮಕುಂಜ ಗ್ರಾಮದ ಕೇಳ್ಕ ನಿವಾಸಿ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ಲೋಕನಾಥ್ ರೈಯವರ ಪತ್ನಿ.











