ಪುತ್ತೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕ ಕ್ರೀಡಾಕೂಟವು ಫೆ.19 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರಗಲಿದೆ.
ಉದ್ಘಾಟನೆಯನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯರವರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ,ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಪಿ.ಕೆ, ಪುತ್ತೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ ಕಾರ್ಯಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ,
ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಗಿರಿಧರ್ ಗೌಡರವರು ಭಾಗವಹಿಸಲಿದ್ದಾರೆ.
ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಕೋಶಾಧಿಕಾರಿ ಕೃಷ್ಣ ಬಿ, ಕ್ರೀಡಾ ಕಾರ್ಯದರ್ಶಿ ವೆಂಕಟೇಶ್, ಗೌರವಾಧ್ಯಕ್ಷ ರಾಮಚಂದ್ರ, ಹಿರಿಯ ಉಪಾಧ್ಯಕ್ಷ ಹರಪ್ರಕಾಶ್ ಬೈಲಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.