ಕಂಬಳಬೆಟ್ಟು: ಅಕ್ರಮ ಜಾನುವಾರು ಸಾಗಾಟದ ವೇಳೆ ಕಾರು ಪಲ್ಟಿ – ಜಾನುವಾರುಗಳ ರಕ್ಷಣೆ

0

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

ಕಾರಿನಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿರುವುದಾಗಿ ಮಾಹಿತಿ ಲಭಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here