ಪುತ್ತೂರು: ಕೋಡಿಂಬಾಡಿ ಮಠದಬೆಟ್ಟು ಶ್ರೀರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ ಮಾ.7 ಮತ್ತು 8ರಂದು ನಡೆಯಲಿದೆ.
ಮಾ.7ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ, ಕಲಶಪ್ರತಿಷ್ಠೆ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ದೈವಗಳಿಗೆ ತಂಬಿಲ, ಭಜನೆ, ಮಹಾರಂಗಪೂಜೆ, ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಸಂತಕಟ್ಟೆ ಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಾ.8ರಂದು ಸಂಜೆ ಭಜನೆ, ದೈವಗಳ ಭಂಡಾರ ತೆಗೆಯುವುದು, ಶ್ರೀದೇವಿಗೆ ಹೂವಿನ ಪೂಜೆ, ಅನ್ನಸಂತರ್ಪಣೆ, ದುಗ್ಗಲಾಯಿ ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಟಿ.ಅಣ್ಣಪ್ಪಯ್ಯ ತೆಂಕಿಲ ತಿಳಿಸಿದ್ದಾರೆ.