




ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇವರ ಸಹಕಾರದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ ಮತ್ತು ಮಹಿಳಾ ಬಂಟರ ಸಂಘದ ಆಶ್ರಯದಲ್ಲಿ ಮಾ.12 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದ ಅಮಂತ್ರಣ ಪತ್ರ ಬಿಡುಗಡೆ ಫೆ. 28ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು.



ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ‍್ಯದರ್ಶಿ ರಮೇಶ್ ಬಿ.ರೈ ಡಿಂಬ್ರಿ, ಉಪಾಧ್ಯಕ್ಷರುಗಳಾದ ಚಿಲ್ಮೆತ್ತಾರು ಜಗಜೀವನ್‌ದಾಸ್ ರೈ, ರೋಶನ್ ರೈ ಬನ್ನೂರು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಪ್ರಧಾನಕಾರ‍್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳಾದ ಅಮ್ಮಣ್ಣ ರೈ ಪಾಪೆಮಜಲು, ಮಿತ್ರದಾಸ್ ರೈ ಡೆಕ್ಕಳ, ಸಂದೀಪ್ ರೈ ಚಿಲ್ಮೆತ್ತಾರು, ಉಮಾಪ್ರಸಾದ್ ರೈ ನಡುಬೈಲು, ರವಿಚಂದ್ರ ರೈ ಕುಂಬ್ರ, ಭಾಸ್ಕರ್ ರೈ ಎಂ ರವರುಗಳು ಉಪಸ್ಥಿತರಿದ್ದರು.












