ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡು ದಿನ ನಡೆಯುವ ವಿಶ್ವಹಿಂದು ಪರಿಷತ್, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಇದರ ಪ್ರಾಂತ ಬೈಠಕ್ ಮತ್ತು ಮಾ.5ರ ಸಂಜೆ ನಡೆಯುವ ಶೌರ್ಯ ಯಾತ್ರೆಯ ಯಶಸ್ವಿಗೆ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು.
ಮಾ.4 ಮತ್ತು 5ರಂದು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಾಂತ ಬೈಠಕ್ ನಡೆಯಲಿದೆ. ಮಾ.5ರ ಸಂಜೆ ಬಜರಂಗದಳ ಪುತ್ತೂರು ಜಿಲ್ಲೆಯ ಶೌರ್ಯ ಯಾತ್ರೆಯು ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಲಿದ್ದು, ದೇವಳದ ಎದುರು ಗದ್ದೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಒಟ್ಟು ಕಾರ್ಯಕ್ರಮ ಯಶಸ್ಸಿಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಲಾಯಿತು.ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಗ್ರಾಮಾಂತರ ಕಾರ್ಯದರ್ಶಿ ರವಿಕುಮಾರ್ ಕೈತ್ತಡ್ಕ, ನಗರ ಉಪಾಧ್ಯಕ್ಷ ಮಧುಸೂದನ್ ಪಡ್ಡಾಯುರು, ಬಜರಂಗದಳ ನಗರ ಸಂಚಾಲಕ ಹರೀಶ್ ದೋಳ್ಪಾಡಿ, ಸಹ ಸಂಚಾಲಕ ಚೇತನ್ ಬೊಳುವಾರು, ಜಿಲ್ಲಾ ನ್ಯಾಯ ಸಂಚಾಲಕ ಮಾದವ ಪೂಜಾರಿ ಉಪಸ್ಥಿತರಿದ್ದರು.