ಪುತ್ತೂರು: ಕರ್ನಾಟಕ ಎಸ್.ಪಿ.ವೈ.ಎಸ್.ಎಸ್ ವತಿಯಿಂದ ಪುತ್ತೂರು ಲಯನ್ಸ್ ಸೇವಾ ಸದನ ಹಾಗೂ ಮಾತೃಛಾಯ ಸಭಾಭವನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಮಾ. 7ರಂದು ಬೆಳಿಗ್ಗೆ 6 ಗಂಟೆಗೆ ನಡೆಯಲಿದೆ.
48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯಲ್ಲಿ ಕೇಂದ್ರ ಸಮಿತಿಯಿಂದ ಶಿಕ್ಷಣ ಪಡೆದ ನುರಿತ ಶಿಕ್ಷಕರಿಂದ ಯೋಗಾಸನ, ಪ್ರಾಣಾಯಾಮ, ಧ್ಯಾನ, ಶರೀರ ಶುದ್ಧೀಕರಣ ಕ್ರಿಯೆ, ಅಗ್ನಿಹೋತ್ರ, ಅಕ್ಯುಫ್ರೆಶರ್ ಕ್ರಿಯೆಗಳು, ಸೂರ್ಯ ನಮಸ್ಕಾರ, ಯೋಗ ಚಿಕಿತ್ಸಾತ್ಮಕ ಕ್ರಿಯೆ, ಆಯುರ್ವೇದ ಆಹಾರ ಪದ್ಧತಿ, ಭಾಷಣ ಕಲೆ, ಭಜನೆ, ಸತ್ಸಂಗಗಳನ್ನು ಉಚಿತವಾಗಿ ಹೇಳಿಕೊಡಲಾಗುತ್ತದೆ.
ಸಮಿತಿಯ ಪ್ರಧಾನ ಸಂಚಾಲಕರಾದ ಅ.ರಾ. ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನರಿಗೆ ಯೋಗದ ಮೂಲಕ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತಿದೆ. ಮಂಗಳೂರಿನಲ್ಲಿ 200ಕ್ಕೂ ಅಧಿಕ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಾಖೆ ಸೇರಿದಂತೆ ಒಟ್ಟು 7 ಶಾಖೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದೆ.
ತರಗತಿಯಲ್ಲಿ 10 ವರ್ಷದಿಂದ ಮೇಲ್ಪಟ್ಟ ಎಲ್ಲಾ ವಯಸ್ಸಿನ ಪುರುಷರು, ಮಹಿಳೆಯರು ಪಾಲ್ಗೊಳ್ಳಬಹುದು. ಪಾಲ್ಗೊಳ್ಳುವವರಿಗೆ ಉದ್ವೇಗ, ಒತ್ತಡ, ಖಿನ್ನತೆ ಶಮನ, ಏಕಾಗ್ರತೆಗಾಗಿ, ನೆನಪಿನ ಶಕ್ತಿ ಚುರುಕಿಗೆ, ಸಂಧಿವಾತ ದೋಷ, ನಿದ್ರೆ ಸಮಸ್ಯೆ, ಆಸಿಡಿಟಿ, ಮೂಲವ್ಯಾಧಿ, ರಕ್ತದೊತ್ತಡ, ಮಧುಮೇಹ, ಗಂಟುನೋವು, ಮೈಗ್ರೇನ್, ತಲೆನೋವು ಇತ್ಯಾದಿ ಸಮಸ್ಯೆಗಳು ನಿವಾರಣೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.