ಪುತ್ತೂರು: ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ವಿಜಯಾ ಪಿ ಮಾತನಾಡಿ ಪ್ರತಿಯೊಂದು ವಿಷಯಗಳಿಗೆ ಕಾರಣ ಹಾಗೂ ಸಂಬಂಧವನ್ನು ತಿಳಿದುಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಶಾಲಾ ಹಿರಿಯ ಶಿಕ್ಷಕರಾದ ರಾಮಚಂದ್ರ ಬಿ ವಿಜ್ಞಾನ ದಿಣಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕ ರವೀಂದ್ರ ಶಾಸ್ತ್ರಿ ಅವರು ಪ್ರಾತ್ಯಕ್ಷಿಕೆಯ ಮೂಲಕ ವಿಜ್ಞಾನ ದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು.
ವಿಜ್ಞಾನ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಪತ್ರಕರ್ತ ಯೂಸುಫ್ ರೆಂಜಲಾಡಿ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಹ ಶಿಕ್ಷಕಿ ಶಶಿಕಲಾ ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.