ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸಹಯೋಗ, ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ಮಹಾ ಅಭಿಯಾನ

0

`ಕರ್ನಾಟಕದ 7 ಅದ್ಭುತಗಳು’ ಅಭಿವೃದ್ಧಿಗೆ ನೀಲನಕ್ಷೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಸಮಸ್ತ ಕನ್ನಡಿಗರು ಸಂಭ್ರಮಿಸಿ ಹೆಮ್ಮೆಪಡುವಂತಹ ಆ ದಿನ ಬಂದೇ ಬಿಟ್ಟಿದೆ. ಜಾಗತಿಕ ಹೆಗ್ಗುರುತುಗಳಾಗಿ ಪ್ರಪಂಚದ 7 ಅದ್ಭುತಗಳು' ಇರುವ ರೀತಿಯಲ್ಲೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿಕರ್ನಾಟಕದ 7 ಅದ್ಭುತಗಳು’ ಘೋಷಣೆಯಾಗಿದೆ. ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಙಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ ತಾಣಗಳನ್ನು ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ೭ ಅದ್ಭುತಗಳು' ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಶನಿವಾರ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿಕರ್ನಾಟಕದ 7 ಅದ್ಭುತ’ಗಳನ್ನು ಉದ್ಘೋಷಿಸಲಾಯಿತು. ಇದೇ ವೇಳೆ, ವಿಜೇತ ತಾಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು. ನಾಡಿನ ಏಳು ಅದ್ಭುತ ತಾಣಗಳನ್ನು ಏಳು ವಿಭಾಗಗಳ ಅಡಿಯಲ್ಲಿ ಹೆಸರಿಸಲಾಗಿದ್ದು, ಅವು ಇಂತಿವೆ.

ಹಿರೇಬೆಣಕಲ್ ಶಿಲಾಸಮಾಧಿಗಳು:

ಕ್ರಿ.ಪೂ 800 ರಿಂದ 200ರವರೆಗಿನ ಕಾಲದ್ದು ಎನ್ನಲಾದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಪ್ರಾಗೈತಿಹಾಸಿಕ ತಾಣವನ್ನು
ಬೃಹತ್ ಶಿಲಾಯುಗದ ಅದ್ಭುತ' ಎಂದು ಘೋಷಿಸಲಾಗಿದೆ.

ಹಂಪಿ: ೧೪ರಿಂದ ೧೬ನೇ ಶತಮಾನದ ನಡುವೆ ನಿರ್ಮಾಣಗೊಂಡ ಭವ್ಯ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಸಾರುವ ಈಗಿನ ವಿಜಯನಗರ ಜಿಲ್ಲೆಯಹಂಪಿ’ಯನ್ನು ಪುರಾತತ್ವ ಅದ್ಭುತ' ಎಂದು ಘೋಷಿಸಲಾಗಿದೆ.

ಗೊಮ್ಮಟೇಶ್ವರ: ಈಗಿನ ಹಾಸನ ಜಿಲ್ಲೆ ಶ್ರವಣಬೆಳಗೊಳದ ವಿಂಧ್ಯಾಗಿರಿಯ ನೆತ್ತಿಯಲ್ಲಿ ೧೦ನೇ ಶತಮಾನದಲ್ಲಿ ಸ್ಥಾಪನೆಯಾದ ೫೭ ಅಡಿಯ ಭವ್ಯ ಗೊಮ್ಮಟೇಶ್ವರ ಪ್ರತಿಮೆಯನ್ನುತಾತ್ವಿಕ ಅದ್ಭುತ’ವೆಂದು ಘೋಷಿಸಲಾಗಿದೆ.

ಗೋಲಗುಮ್ಮಟ: ೧೭ನೇ ಶತಮಾನದಲ್ಲಿ ಆಗಿನ ಬಿಜಾಪುರ (ಹಾಲಿ ವಿಜಯಪುರ) ಸುಲ್ತಾನ ಮೊಹಮ್ಮದ್ ಆದಿಲ್ ಶಾಹ್ ನಿರ್ಮಿಸಿದ ಬೃಹತ್ ಗೋಲಗುಮ್ಮಟವು ವಾಸ್ತು ವಿಜ್ಙಾನಅದ್ಭುತ'ವೆಂಬ ಗೌರವಕ್ಕೆ ಪಾತ್ರವಾಗಿದೆ.

ಮೈಸೂರು ಅರಮನೆ: ೧೯-೨೦ನೇ ಶತಮಾನದಲ್ಲಿ ಒಡೆಯರ್ ರಾಜವಂಶಸ್ಥರಿಂದ ನಿರ್ಮಾಣಗೊಂಡ ಮೈಸೂರಿನ ಜಗದ್ವಿಖ್ಯಾತ ಅಂಬಾ ವಿಲಾಸ ಅರಮನೆಯನ್ನುರಾಜಪರಂಪರಾ ಅದ್ಭುತ’ ಎಂದು ಘೋಷಿಸಲಾಗಿದೆ.

ಜೋಗ ಜಲಪಾತ: ಭಾರತದಲ್ಲೇ ಅತಿ ಸುಂದರ ಎನಿಸಿರುವ, ೮೩೦ ಅಡಿ ಎತ್ತರದಿಂದ ಧುಮುಕುವ ಶಿವಮೊಗ್ಗ ಜಿಲ್ಲೆಯ ವಿಶ್ವಪ್ರಸಿದ್ಧ ಜೋಗ ಜಲಪಾತವನ್ನು ನೈಸರ್ಗಿಕ ಅದ್ಭುತ-ನೆಲ' ಎಂದು ಘೋಷಿಸಲಾಗಿದೆ.

ನೇತ್ರಾಣಿ ದ್ವೀಪ: ಉತ್ತರ ಕನ್ನಡ ಜಿಲ್ಲೆ ಮುರುಡೇಶ್ವರ ಬಳಿಯ ಅರಬ್ಬಿ ಸಮುದ್ರದ ನಡುವೆ ಪ್ರೀತಿಯ ಸಂಕೇತದಂತೆ ಹೃದಯಾಕಾರದಲ್ಲಿರುವ ನೇತ್ರಾಣಿ ದ್ವೀಪವನ್ನುನೈಸರ್ಗಿಕ ಅದ್ಭುತ-ಜಲ’ ಎಂದು ಘೋಷಿಸಲಾಗಿದೆ.


ಅಭಿವೃದ್ಧಿಗೆ ನೀಲ ನಕ್ಷೆಗೆ ಸಿಎಂ ಸೂಚನೆ:

ಉದ್ಘೋಷಣೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಈ ಏಳೂ ಅದ್ಭುತಗಳ ಸ್ಥಳದಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಬಗ್ಗೆ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೆನೆ ಎಂದು ತಿಳಿಸಿದರು.


ಕರ್ನಾಟಕದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಕರ್ನಾಟಕದ ೭ ಅದ್ಭುತಗಳು' ಅಭಿಯಾನದ ರಾಯಭಾರಿ, ಖ್ಯಾತ ನಟ ರಮೇಶ್ ಅರವಿಂದ್ ಸಂದರ್ಭೋಚಿತವಾಗಿ ಮಾತನಾಡಿದರು. ಕೊಪ್ಪಳ ಜಿಲ್ಲಾಧಿಕಾರಿ ಸುಂದರೇಶ್ ಬಾಬು, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ವಿಜಯಪುರ ಜಿಲ್ಲಾಧಿಕಾರಿ ಮಹಾಂತೇಶ್ ದಾನಮ್ಮನವರ್, ಮೈಸೂರು ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಪರವಾಗಿ ಸಾಗರ ಉಪವಿಭಾಗಾಧಿಕಾರಿ ಪಲ್ಲವಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ವಿಜೇತ ತಾಣಗಳ ಪ್ರಮಾಣಪತ್ರ ಹಾಗೂ ಘೋಷಣಾ ಫಲಕ ಸ್ವೀಕರಿಸಿದರು. ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕನ್ನಡಪ್ರಭ ದಿನಪತ್ರಿಕೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿವಾಹಿನಿಕರ್ನಾಟಕದ ೭ ಅದ್ಭುತಗಳ’ ಆಯ್ಕೆಗೆ ಮಹಾ ಅಭಿಯಾನ ಕೈಗೊಂಡಿದ್ದವು.

LEAVE A REPLY

Please enter your comment!
Please enter your name here