ಪುತ್ತೂರು:ವ್ಯಕ್ತಿಗಳಿಬ್ಬರಿಗೆ ಹಲ್ಲೆ ನಡೆಸಿ ಕಾರಿಗೆ ಹಾನಿಯುಂಟು ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ಆಲಂಕಾರು ಗ್ರಾಮದ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಎದುರು ಕಾರೊಂದಕ್ಕೆ ಸಂಜೀವ, ಕಿಶೋರ್ ಮತ್ತಿತರರು ಹಾನಿಯುಂಟು ಮಾಡಿ ಕಾರಿನಲ್ಲಿದ್ದ ರಾಜೇಶ್ವರಿ ಮತ್ತು ಅವರ ಪುತ್ರ ರಾಮ್ ಕುಮಾರ್ ಅವರಿಗೆ ಹಲ್ಲೆ ನಡೆಸಿದ್ದರು. ಈ ಕುರಿತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಬಳಿಕದ ಬೆಳವಣಿಗೆಯಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಿಶೋರ್ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿ ಕಿಶೋರ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮೋಹಿನಿ ಕೆ ವಾದಿಸಿದ್ದರು.