ಮಾ.12:ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ
ಉಚಿತ ವೈದ್ಯಕೀಯ ತಪಾಸಣಾ ಶಿಬಿರ

0

ಪುತ್ತೂರು: ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ(ಸಿಎಲ್‌ಸಿ) ಪುತ್ತೂರು, ಮಾಯಿದೆ ದೇವುಸ್ ಚರ್ಚ್‌ನ ಆರೋಗ್ಯ ಆಯೋಗ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಾ.12 ರಂದು ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.

ಶಿಬಿರದಲ್ಲಿ ಸ್ತ್ರೀಯರ ಆರೋಗ್ಯ ತಪಾಸಣೆ, ಸ್ತ್ರೀಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ತಪಾಸಣೆ, ವಿಡಿಯೋ ಪ್ರದರ್ಶನದ ಮೂಲಕ ಮಾಹಿತಿ, ಕಿವಿ, ಮೂಗು, ಗಂಟಲು ತಪಾಸಣೆ, ಚರ್ಮರೋಗ ತಪಾಸಣೆ ಹಾಗೂ ಇನ್ನಿತರ ಖಾಯಿಲೆಗಳ ತಪಾಸಣೆ ಹಾಗೂ ಚಿಕಿತ್ಸೆ ಮುಂತಾದ ಸೇವೆಗಳು ಲಭ್ಯವಿರುತ್ತದೆ.

ಶಿಬಿರದಲ್ಲಿ ಪಾಲ್ಗೊಂಡವರಿಗೆ ಮುಂದಿನ ಚಿಕಿತ್ಸೆಗೆ ಫಾ|ಮುಲ್ಲರ್ ಆಸ್ಪತ್ರೆಯಲ್ಲಿ ನೋಂದಾವಣೆ, ರಕ್ತ ಪರೀಕ್ಷೆ, TC, DC, ESR MP, ಎದೆಯ ಎಕ್ಸ್-ರೇ, ಹೊರರೋಗಿ ಚಿಕಿತ್ಸೆ(ಎಲ್ಲಾ ವಿಭಾಗಗಳಲ್ಲಿ), ಒಳರೋಗಿ ದಾಖಲಾತಿ(ಜನರಲ್ ವಾರ್ಡ್), ಬೆಡ್, ಊಟ, ಆಸ್ಪತ್ರೆಯ ಸೇವೆಗಳು, ವೈದ್ಯರ ಚಿಕಿತ್ಸಾ ವೆಚ್ಚ, ಎಲ್ಲಾ ಶಸ್ತ್ರ ಚಿಕಿತ್ಸೆ, ಅರಿವಳಿಕೆ ತಜ್ಞರ ಶುಲ್ಕಗಳು, ಸಿಟಿ ಸ್ಕ್ಯಾನ್ ಶೇ.25 ರಿಯಾಯಿತಿ, ಅಲ್ಟ್ರಾ ಸೌಂಡ್ ಶೇ.50 ರಿಯಾಯಿತಿ ಮುಂತಾದ ಸೌಲಭ್ಯಗಳು ಸಿಗಲಿದ್ದು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here