ಪುತ್ತೂರು:ಕರ್ನಾಟಕ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಸೊಸೈಟಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ಸ್ಪರ್ಶ ಕ್ಯಾನ್ಸರ್ ಅಭಿಯಾನ ಹಾಗೂ ಸ್ತ್ರೀ ಶಕ್ತಿ ಗೊಂಚಲು ಸಮಿತಿ- ಕೊಡಿಪ್ಪಾಡಿ ಇದರ ಜಂಟಿ ಆಶ್ರಯದಲ್ಲಿ ಕೊಡಿಪ್ಪಾಡಿ ಗ್ರಾಮದ ಅರ್ಕ ಅಂಗನವಾಡಿ ಕೇಂದ್ರದಲ್ಲಿ ಮಾ.10 ರಂದು ಕ್ಯಾನ್ಸರ್ ರೋಗದ ಮಾಹಿತಿ ಕಾರ್ಯಾಗಾರ ಮತ್ತು ಮಹಿಳಾ ದಿನಾಚರಣೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಿಡ್ಸ್ ಸ್ಪರ್ಶ ಯೋಜನೆಯ ಸಂಯೋಜಕರಾದ ಶ್ಯಾಮ ಪಿ.ಯವರು ಕ್ಯಾನ್ಸರ್ ರೋಗದ ಕುರಿತು ಲಕ್ಷಣ, ಆರಂಭಿಕ ಪತ್ತೆ, ಚಿಕಿತ್ಸೆಯ ವಿಧಾನ ಹಾಗೂ ತಡೆಗಟ್ಟಬಹುದಾದ ಅಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿಶ್ವ ಮಹಿಳಾ ದಿನ ಆಚರಣೆಯ ಭಾಗವಾಗಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರು, ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸದಸ್ಯರು ಮತ್ತು ಪುಟಾಣಿ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.