ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಮತ್ತು ಕಲ್ಲುರ್ಟಿ ದೈವಗಳ ಮೂಲ ಸ್ಥಾನ ಕಬಕ ಗ್ರಾಮದ ಕಾರ್ಜಾಲುವಿನಲ್ಲಿ ಮಾ.11ರಂದು ಕಾರ್ಜಾಲು ಶ್ರೀ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿ ಜಾತ್ರೋತ್ಸವದಲ್ಲಿ ಮಧ್ಯಾಹ್ನ ಸಾರ್ವಜನಿಕ ಅನ್ನಪ್ರಸಾದ ವಿತರಣೆ ನಡೆಯಿತು. 10ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.
ಬೆಳಿಗ್ಗೆ ಗಣಪತಿ ಹೋಮ, ಸ್ಥಳಶುದ್ದಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. ತಂಬಿಲ ಸೇವೆಯ ಬಳಿಕ ಮಧ್ಯಾಹ್ನ ಕಾರ್ಜಾಲು ಧೂಮಾವತಿ, ಕಲ್ಕುಡ, ಕಲ್ಲುರ್ಟಿ ದೈವಗಳ ಸನ್ನಿಧಿಯಲ್ಲಿ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮ ಮತ್ತು ತಂಬಿಲ ಸೇವೆಯ ಸಂದರ್ಭ ದೊಂಪದ ಬಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಉತ್ಸವ ಸಮಿತಿ ಅಧ್ಯಕ್ಷ ಕೆ.ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವೆಲಪ್ ಮೆಂಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.