ನರಿಮೊಗರು: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಾ.15, 16ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀಮಹಾಮೃತ್ಯುಂಜಯ ಹೋಮ, ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.
ಮಾ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ ಶ್ರೀಮಹಾಗಣಪತಿ ಹೋಮ, ಶ್ರೀಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ, ಶ್ರೀದೇವರ ಬಲಿ ಹೊರಟು ಉತ್ಸವ, ಸುಡುಮದ್ದು ಪ್ರದರ್ಶನ, ವಸಂತ ಕಟ್ಟೆಪೂಜೆ,
ಮಾ.16ರಂದು ಬೆಳಿಗ್ಗೆ ಶ್ರೀಮಹಾಗಣಪತಿ ಹೋಮ, ಕಲಶಪೂಜೆ, ಶ್ರೀದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಶ್ರೀದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವದ ಭಂಡಾರ ತೆಗೆಯುವುದು, ರಾತ್ರಿ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ದೈವದ ನೇಮೋತ್ಸವ ನಡೆಯಲಿದೆ ಎಂದು ಶ್ರೀದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆ ತಿಳಿಸಿದ್ದಾರೆ.