ಬೆಂಗಳೂರು: ರಾಜ್ಯದ 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿ, ಮುಂದಿನ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಅವಕಾಶ ಕಲ್ಪಿಸಿತ್ತು. ಏಕಸದಸ್ಯ ಪೀಠದ ಆದೇಶದ ವಿರುದ್ಧ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪ್ರಮಾಣ ಪತ್ರ ಸಲ್ಲಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿದೆ.ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.