ವಿಟ್ಲ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದ ಬಗ್ಗೆ ವರದಿಯಾಗಿದೆ.
ಪದ್ಮನಿ (35 ವ.) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಪದ್ಮನಿರವರು ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ತಂದೆ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಪದ್ಮನಿರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಮಾ.15ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.