





ವಿಟ್ಲ: ವ್ಯಕ್ತಿಯೋರ್ವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಗ್ರಾಮದ ಬಂಗೇರಕೋಡಿ ಎಂಬಲ್ಲಿ ನಡೆದಿದೆ.


ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ವೀರಪ್ಪ ಗೌಡ(55 ವ.) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಪಕ್ಕದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.





ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಜರು ನಡೆಸಲಾಗಿದೆ. ಮೃತರ ಪುತ್ರ ಮುರಳೀಧರ ಕುಮಾರ್ ಬಿ.ರವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








