





ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ಮಾ.18ರಂದು ಮಧ್ಯಾಹ್ನ ನಡೆದಿದೆ.



ಉಕ್ಕುಡ ಆಲಂಗಾರು ನಿವಾಸಿ ರಂಜಿತ್ ಮೃತದುರ್ದೈವಿ.





ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದಿದೆ.

ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ಯದಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ. ಸಹ ಸವಾರ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.





