ಪುತ್ತೂರು: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇದರ ವತಿಯಿಂದ ಸಮಗ್ರ ಕೃಷಿಯಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ದ.ಕ.ಜಿಲ್ಲಾ ಮಟ್ಟದ ಶ್ರೇಷ್ಠ ರೈತ ಮಹಿಳಾ ಪ್ರಶಸ್ತಿಯನ್ನು ಶಿವಮೊಗ್ಗದಲ್ಲಿ ಜರಗಿದ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪುತ್ತೂರಿನ ಕುರಿಯ ಗ್ರಾಮದ ಡಿಂಬ್ರಿಗುತ್ತು ಡಾ.ಆಶಾ ಶಂಕರ್ ಭಂಡಾರಿಯವರು ಮಾ. 18 ರಂದು ಸ್ವೀಕರಿಸಿದರು.
ಮುರುಘಾಮಠದ ಮಹಾಸ್ವಾಮಿ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲ ಸಚಿವ ಡಾ. ಆರ್ ಲೋಕೇಶ್, ಕುಲಪತಿ ಡಾ.ಆರ್.ಸಿ.ಜಗದೀಶ್, ಆಡಳಿತಾಧಿಕರಿ ಡಾ.ಜಿ. ಕೆ. ಗಿರಿಜೇಶ್, ವಿಶ್ರಾಂತ ಕುಲಪತಿ ಡಾ.ಪಿ.ನಾರಾಯಣ ಸ್ವಾಮಿ, ವಿಶ್ರಾಂತ ಸಂಶೋಧನಾ ನಿರ್ದೇಶಕ ಡಾ.ಬಿ.ಸತ್ಯನಾರಾಯಣ ರೆಡ್ಡಿ, ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ.ವಾಲಿ, ವಿಸ್ತರಣಾ ನಿರ್ದೇಶಕ ಡಾ.ಬಿ.ಹೇಮ್ಲಾ ನಾಯಕ್ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.