ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 6ನೇ ವಾರ್ಷಿಕ ಸಮಾರಂಭ-ಪೂರ್ವಭಾವಿ ಸಭೆ

0

ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 6ನೇ ವಾರ್ಷಿಕ ಸಮಾರಂಭವು ಏಪ್ರಿಲ್ 19 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.23 ರಂದು ದರ್ಬೆ ಪ್ರಶಾಂತ್ ಮಹಲ್ ನ ಲ್ಲಿ ಜರಗಿತು.


ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಕೆ.ಸೀತಾರಾಮ ರೈ ಸವಣೂರುರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರಗಿದ್ದು, ಈ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆ.ಸೀತಾರಾಮ ರೈಯವರು, ಯಕ್ಷಗಾನ ಎಂಬುದು ಗಂಡು ಕಲೆಯಾಗಿದ್ದು, ಅಬಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಜನಪ್ರಿಯ ಕಲೆಯಾಗಿ ಜನರನ್ನು ಆಕರ್ಷಿಸುತ್ತಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕವು ಕಳೆದ ಐದು ವರ್ಷಗಳಿಂದ ಪ್ರಸಿದ್ಧ ಯಕ್ಷಗಾನ ಆಟವನ್ನು ಪ್ರದರ್ಶಿಸುವ ಮೂಲಕ ತನ್ನ ವಾರ್ಷಿಕೋತ್ಸವವನ್ನು ನಿರಂತರ ಆಚರಿಸುತ್ತಾ ಬಂದಿದೆ. ಈ ಬಾರಿಯೂ ತನ್ನ ಆರನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.


ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ಉಪಾಧ್ಯಕ್ಷರಾದ ಡಾ.ಅಶೋಕ್ ಪಡಿವಾಳ್ ಹಾಗೂ ಶ್ರೀಮತಿ ಹರಿಣಾಕ್ಷಿ ಜೆ.ಶೆಟ್ಟಿ, ಕೋಶಾಧಿಕಾರಿ ಎ.ಜಗಜೀವನ್ ದಾಸ್ ರೈ ಚಿಲ್ಮೆತ್ತಾರು, ಸಮಿತಿ ಸದಸ್ಯರಾದ ಎಂ.ಗಂಗಾಧರ್ ರೈ, ಗೌರವ ಸಲಹೆಗಾರ ಚಂದ್ರಹಾಸ ರೈ ತುಂಬೆಕೋಡಿ ಉಪಸ್ಥಿತರಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ಅಧ್ಯಕ್ಷ ನೋಣಾಲು ಜೈರಾಜ್ ಭಂಡಾರಿ ಸ್ವಾಗತಿಸಿ, ವಂದಿಸಿದರು.


ಏ. 19: 6ನೇ ವಾರ್ಷಿಕ ಸಮಾರಂಭ..
ಆರನೇ ವಾರ್ಷಿಕ ಸಮಾರಂಭವು ಏ.19 ರಂದು ಸಂಜೆ ಜರಗಲಿದ್ದು, ಮೊದಲಿಗೆ ಸಭಾ ಕಾರ್ಯಕ್ರಮ ಬಳಿಕ ರಾತ್ರಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ವರ್ಷದ ಜನಪ್ರಿಯ ಪ್ರಸಂಗ “ಧರ್ಮ ಸಿಂಹಾಸನ” ಪೌರಾಣಿಕ ಪುಣ್ಯ ಕಥಾನಕ ಪ್ರದರ್ಶನಗೊಳ್ಳಲಿದೆ.

ಏ.1:ಆಮಂತ್ರಣ ಪತ್ರಿಕೆ ಬಿಡುಗಡೆ..
ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಯು ಏ.1 ರಂದು ಬೆಳಿಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಾಗೂ ಸಂಜೆ ದರ್ಬೆ ಪ್ರಶಾಂತ್ ಮಹಲ್ ನಲ್ಲಿ ಜರಗಲಿದೆ ಎಂದು ಅಧ್ಯಕ್ಷ ನೋಣಾಲು ಜೈರಾಜ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here