ಸವಣೂರು ಸ.ಪ.ಪೂ.ಕಾಲೇಜಿನ ನೂತನ ಗೇಟ್ ಉದ್ಘಾಟನೆ

0

ಸರಕಾರಿ ಶಾಲೆಗಳಿಗೆ ಕೊಡುಗೆ ನೀಡುತ್ತಿದ್ದೇನೆ- ಸವಣೂರು ಸೀತಾರಾಮ ರೈ

ಚಿತ್ರ- ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಸ್ವಾತಂತ್ರ್ಯ ಸೇನಾನಿ ಹಾಗೂ ಶಿಕ್ಷಕ ಶೀಂಟೂರು ದಿ.ನಾರಾಯಣ ರೈಯವರ ಸ್ಮರಣಾರ್ಥ ಅವರ ಪುತ್ರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಸವಣೂರು ಸ.ಪ.ಪೂ.ಕಾಲೇಜಿಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್ ಇದರ ಉದ್ಘಾಟನಾ ಸಮಾರಂಭ ಮಾ. 24 ರಂದು ಜರಗಿತು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ನೂತನ ಗೇಟ್‌ನ್ನು ಉದ್ಘಾಟಿಸಿ, ಮಾತನಾಡಿ ನನ್ನದೇ ಆದ ಶಿಕ್ಷಣ ಸಂಸ್ಥೆಯ ಪೋಷಣೆಯ ಜೊತೆಗೆ, ಈ ಪರಿಸರದ ಸುತ್ತ ಮುತ್ತಲಿನ ಸುಮಾರು 8 ಗ್ರಾಮಗಳ ಸರಕಾರಿ ಶಾಲೆಗಳಿಗೆ ನಾನು ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಸಹಕಾರ ನೀಡುತ್ತಾ ಬಂದಿದ್ದೇನೆ. ಅದರಲ್ಲೂ ಪ್ರತಿ ವರ್ಷ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಸ್ಥೆಯ ಮೂಲಕ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಪ್ರೋತ್ಸಾಹ ಧನವನ್ನು ನೀಡುತ್ತಿದ್ದೇನೆ. ಸವಣೂರು ಸ.ಪ.ಪೂ.ಕಾಲೇಜಿನ ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಸುಮಾರು 50 ಸಾವಿರ ರೂ, ವೆಚ್ಚದ ಗೇಟ್‌ನ್ನು ಕೊಡುಗೆಯಾಗಿ ನೀಡಿದ್ದೇನೆ. ಮುಂದೆಯೂ ಸಂಸ್ಥೆಯ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿ ಶುಭಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸವಣೂರು ಸ.ಪ.ಪೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ‍್ಯಾಧ್ಯಕ್ಷ ಗಿರಿಶಂಕರ್ ಸುಲಾಯ ದೇವಸ್ಯರವರು ಶುಭಹಾರೈಸಿದರು.
ಸವಣೂರು ಸ.ಪ.ಪೂ ಕಾಲೇಜಿನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಪಿ.ಡಿ.ಕೃಷ್ಣಕುಮಾರ್ ರೈ ದೇವಸ್ಯರವರು ಕಾಲೇಜಿಗೆ ಗೇಟ್ ಕೊಡುಗೆ ನೀಡಿದ ಸವಣೂರು ಕೆ.ಸೀತಾರಾಮ ರೈಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಿದರು.

ಕಾಲೇಜಿನ ಪ್ರಾಂಶುಪಾಲೆ ಪದ್ಮಾವತಿ ಎನ್.ಪಿ, ಸ್ವಾಗತಿಸಿ, ಫ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ವಂದಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಕಾರ‍್ಯಕ್ರಮ ನಿರೂಪಿಸಿದರು. ಗುತ್ತಿಗೆದಾರರಾದ ಗಂಗಾಧರ್ ಪೆರಿಯಡ್ಕ, ರಾಜೇಶ್ ಇಡ್ಯಾಡಿ, ಸ.ಪ.ಪೂ.ಕಾಲೇಜ್ ಉಪನ್ಯಾಸಕರುಗಳು ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರುಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here