ಆಡಳಿತ ಮಟ್ಟದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ – ನಗರಸಭೆ ಅಧ್ಯಕ್ಷರಿಂದ ಅಧಿಕಾರಿ, ಸಿಬ್ಬಂದಿಗಳಲ್ಲಿ ಮನವಿ

0

ಪುತ್ತೂರು: ಚುನಾವಣೆ ಘೋಷಣೆಯಾದ ಬಳಿಕ ನಗರಸಭೆ ಆಡಳಿತ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಮನವಿ ಮಾಡಿದರು.

ಮಾ.29ರಂದು ಬೆಳಿಗ್ಗೆ ಚುನಾವಣೆ ಘೋಷಣೆಯಾಗುವ ಮೊದಲು ನಗರಸಭೆಯಲ್ಲಿ ನಡೆದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು. ಜೊತೆಗೆ ಪುತ್ತೂರು ಜಾತ್ರೆಯ ಸಂದರ್ಭ ಸ್ವಚ್ಛತೆ, ನೀರು, ದಾರಿ ದೀಪದ ಕುರಿತು ಮುತುವರ್ಜಿ ವಹಿಸಬೇಕು. ಕಚೇರಿಯಲ್ಲಿ ಸಾರ್ವಜನಿಕರಿಗೆ ಅವರ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಿಕೊಡಬೇಕು ಎಂದ ಅವರು ಎರಡೂವರೆ ವರ್ಷ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉತ್ತಮ ಸಹಕಾರ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ನಾವು ಸ್ವಚ್ಛತೆಯಲ್ಲಿ ಮುಂದಿದ್ದೇವೆ. ಅದನ್ನು ಉಳಿಸಿಕೊಂಡು ಮುಂದೆ ಜಾತ್ರೆ ಸಂದರ್ಭದಲ್ಲಿ ಸ್ವಚ್ಛತೆ ಕುರಿತು ತುಂಬಾ ಕಾಳಜಿ ವಹಿಸಿ ಎಂದರು. ನಗರಸಭೆ ಉಪಾಧ್ಯಕ್ಷೆ ವಿದ್ಯಾ ಅರ್ ಗೌರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರಸಭಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here