ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆ.ಸಿ.ಫಾರಂನಿಂದ ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾದ ದೇವಗಿರಿ ವೃತ್ತ ಹಾಗೂ ಮಹಾದ್ವಾರದ ಉದ್ಘಾಟನೆ ಮಾ.29ರಂದು ನಡೆಯಿತು.
ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದ ಉಪನಿರ್ದೇಶಕ ಡಾ. ವೆಂಕಟೇಶ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಪಶುವೈದ್ಯಾಧಕಾರಿ ಡಾ. ಧರ್ಮಪಾಲ ಕೆ, ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್ ಕುಮಾರ್, ಆತೂರು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ದೇವಸ್ಥಾನದ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ, ಉದ್ಯಮಿ ಕೇಶವ ಅಮೈ ಮೊದಲಾದವರು ಉಪಸ್ಥಿತರಿದ್ದರು. ಸುದೀಶ್ ಪಟ್ಟೆ ಸ್ವಾಗತಿಸಿ ವಂದಿಸಿದರು. ಶಿಕ್ಷಕ ವಸಂತ ಪಲ್ಲಡ್ಕ ನಿರೂಪಿಸಿದರು.