ಉಪ್ಪಿನಂಗಡಿ: ಆರೋಗ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ಡೈಸಿ ವಿ.ಟಿ. ಅವರು ಮಾ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಮೂಲತಃ ಕೊಕ್ಕಡದ ಡೈಸಿ ಅವರು ಬೆಳಗಾವಿ ಜಿಲ್ಲೆಯ ಕಕ್ಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಭಡ್ತಿ ಹೊಂದಿ ಬಂಟ್ವಾಳ ತಾಲೂಕಿನ ದೈವಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪ್ರಸ್ತುತ ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಮಾ.೩೧ರಂದು ಸೇವಾ ನಿವೃತ್ತಿಯನ್ನು ಹೊಂದಲಿದ್ದಾರೆ.