ಕಾಣಿಯೂರು : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ. 27ರಿಂದ ಮಾ.30ರವರೆಗೆ ನಡೆದ 42ನೇ ನ್ಯಾಷನಲ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಕಾಣಿಯೂರು ಪೆರ್ಲೋಡಿ ಸುಶೀಲರವರು 5 ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ.
70ರ ವಯೋಮಾನದ 1000 ಮೀ ವೇಗದ ನಡಿಗೆಯಲ್ಲಿ ಪ್ರಥಮ, 400 ಮೀ, 200 ಮೀ ಹಾಗೂ 800ಮೀ ಓಟದಲ್ಲಿ ಪ್ರಥಮ ಹಾಗೂ 65 ವಯೋಮಾನದ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಚಿನ್ನದ ಪಡೆದುಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿಕೊಂಡು ಬರುತ್ತಿರುವ ಸುಶೀಲರವರು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.