ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 10 ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯ ಉದ್ಘಾಟನೆ

0

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 10 ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಮಾ. 31 ರಂದು ಪರೀಕ್ಷಾ ಪ್ರಕ್ರಿಯೆಯನ್ನು ಸಂಸ್ಥೆಯ ಸಂಚಾಲಕರಾದ ಸವಣೂರು ಕೆ.ಸೀತಾರಾಮ ರೈಯವರು ದೀಪ ಬೆಳಗಿಸಿ, ಉದ್ಘಾಟಸಿದರು. ಬಳಿಕ ಮಾತನಾಡಿದ ಅವರು ಸಂಸ್ಥೆಯ ವತಿಯಿಂದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮವಾದ ವಾತಾವರಣ ಇದ್ದು, ಭವಿಷ್ಯದಲ್ಲಿ ಉನ್ನತವಾದ ಸ್ಥಾನವನ್ನು ಪಡೆಯುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪರೀಕ್ಷಾ ಕೇಂದ್ರದ ಅಧೀಕ್ಷಕರಾದ ದೋಳ್ಪಾಡಿ ಪ್ರೌಢಶಾಲಾ ಮುಖ್ಯಗುರು ಶಶಿಧರ್, ಉಪಅಧೀಕ್ಷರಾದ ಕಲ್ಪಣೆ ಪ್ರೌಢಶಾಲೆಯ ಕಾಂಚಣ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ಉಪಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ವಿವಿಧ ಪದಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರುಗಳು ಉಪಸ್ಥಿತರಿದ್ದರು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸೆಂಟರ್‌ನಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯ, ಎಸ್‌ಜಿಎಂ ಸರ್ವೆ, ಸರಕಾರಿ ಪ್ರೌಢಶಾಲೆಗಳಾದ ಸವಣೂರು, ಕಾಣಿಯೂರು, ದೋಳ್ವಾಡಿ, ಮಂಜುನಾಥನಗರ, ಬೆಳಂದೂರು ಈಡನ್, ಕಾಣಿಯೂರು ಪ್ರಗತಿ ಕನ್ನಡ ಮತ್ತು ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 387 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎ. 15 ರತನಕ ಪರೀಕ್ಷೆ ನಡೆಯಲಿದೆ.

LEAVE A REPLY

Please enter your comment!
Please enter your name here